Oplus_131072

ಸಣ್ಣ ಪ್ರಮಾಣದಲ್ಲಿ ಸಾಲ ಪಡೆದವರಿಗೆ ಕಿರುಕುಳ ನೀಡುವುದನ್ನು ತಪ್ಪಿಸುವುದಕ್ಕಾಗಿ ರಾಜ್ಯ ಸರ್ಕಾರ ಹೊರಡಿಸಿದ್ದ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಸುಗ್ರೀವಾಜ್ಞೆ 2025 (ಮೈಕ್ರೋ ಫೈನಾನ್ಸ್) ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.

ಕರ್ನಾಟಕ ಹೈರ್ ಪರ್ಚೇಸ್ ಅಸೋಸಿಯೇಷನ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಇಂದು (ಮಾರ್ಚ್ 17) ವಜಾಗೊಳಿಸಿ ಹೈಕೋರ್ಟ್​ ಆದೇಶ ಹೊರಡಿಸಿದೆ. ಇದರಿಂದ ಸಿದ್ದರಾಮಯ್ಯ ಸರ್ಕಾರ ಮೇಲುಗೈ ಸಾಧಿಸಿದೆ.ಕರ್ನಾಟಕ ಹೈಯರ್ ಪರ್ಚೇಸಿಂಗ್ ಅಸೋಸಿಯೇಷನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ವಿಚಾರಣೆ ಪೂರ್ಣಗೊಳಿಸಿ ಇಂದಿಗೆ ಆದೇಶವನ್ನು ಕಾಯ್ದಿರಿಸಿತ್ತು. ಅಲ್ಲದೇ, ಸುಗ್ರೀವಾಜ್ಞೆ ಕುರಿತಂತೆ ನ್ಯಾಯಾಲಯ ಪರಾಮರ್ಶಿಸಿ ಸ್ಪಷ್ಟೀಕರಣ ನೀಡುವ ಅಗತ್ಯವಿದೆ ಎಂದು ಪೀಠ ತಿಳಿಸಿತು.

Oplus_131072

ಇದಕ್ಕೆ ರಾಜ್ಯ ಸರ್ಕಾರ, ಮೈಕ್ರೋ ಫೈನಾನ್ಸ್ ಗಳಿಗೆ ಮಾತ್ರ ಈ ನಿಯಮಗಳು ಅನ್ವಯವಾಗುತ್ತದೆ. ವಾರ್ಷಿಕ 3 ಲಕ್ಷಕ್ಕಿಂತ ಕಡಿಮೆ ವರಮಾನದವರಿಗೆ ಭದ್ರತೆ ರಹಿತ ಸಾಲಕ್ಕೆ ಅನ್ವಯವಾಗುತ್ತದೆ ಎಂದು ಮಾಹಿತಿ ನೀಡಿತ್ತು. ಸರ್ಕಾರದ ಈ ಹೇಳಿಕೆ ಪರಿಗಣಿಸಿ ಹೈಕೋರ್ಟ್​ ರಿಟ್​ ಅರ್ಜಿಯನ್ನು ವಜಾಗೊಳಿಸಿದೆ.

Leave a Reply

Your email address will not be published. Required fields are marked *