ಮೈಸೂರು :ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಟಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಸ್ತಾಕ್ ಉತ್ಸವಕ್ಕೆ ಚಾಲನೆ ನೀಡಿದ್ದಾರೆ.ಜೊತೆಗೆ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಬಳಿಕ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಿದ್ದಾರೆ.ಈ ಬಾರಿಯ ದಸರಾಗೆ ಅರಮನೆ ನಗರಿ ಮೈಸೂರು ಮದುವಣಗಿತ್ತಿಯಂತೆ ಸಿಂಗಾರಗೊಂಡು ನಿಂತಿದೆ. ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ಬೀದಿಗಳು, ಕಲೆ, ಸಾಹಿತ್ಯ, ಸಂಸ್ಕೃತಿಗಳನ್ನು ನೋಡುಗರಿಗೆ ಉಣಬಡಿಸಲು ಎದುರುನೋಡುತ್ತಿರುವ ವೇದಿಕೆಗಳು,

ತಳಿರು ತೋರಣಗಳಿಂದ ಸಿಂಗಾರಗೊಂಡ ಮೈಸೂರು ಅರಮನೆ ಹೀಗೆ ಇಡೀ ನಗರವೇ ಹೊಸರೂಪ ಪಡೆದು ಕಂಗೊಳಿಸುತ್ತಿದೆ.

ಗಜಪಡೆ ನಿತ್ಯದ ತಾಲೀಮ ಮುಗಿಸಿ, ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿ ಅಂಬಾರಿಯಲ್ಲಿ ಹೊತ್ತು ಸಾಗಲು ಸರ್ವಸನ್ನದ್ಧಗೊಂಡಿದೆ. ಜೊತೆಗೆ ಅಭಿಮನ್ಯು – ಭೀಮ ಜೋಡಿ ನೋಡುಗರ ಮನಸೂರೆಗೊಳಿಸಲಿದ್ದಾರೆ.

Leave a Reply

Your email address will not be published. Required fields are marked *