
ಸ್ವಂತ ವಾಹನದ ಮೇಲೆ ಪೊಲೀಸ್ ಇಲಾಖೆಯ ಅಧಿಕಾರಿಗಳಾಗಲಿ ಅಥವಾ ಸಿಬ್ಬಂದಿ ಪೊಲೀಸ್ ಎಂದು ಬರೆಸುವಂತಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.ಶ್ರವಣ ಬೆಳಗೊಳದ ಶಾಸಕ ಬಾಲಕೃಷ್ಣ ಸಿಎನ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಲಿಖಿತ ಮೂಲಕ

ಉತ್ತರಿಸಿರುವ ಪರಮೇಶ್ವರ್ ಅವರು, ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸಿದ್ದರೇ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಉಲ್ಲೇಖಿಸಿದ್ದಾರೆ.ಇದರ ಜೊತೆಗೆ ಪೊಲೀಸ್ ಮಕ್ಕಳು ಸಂಬಂದಿಕರು ಪೊಲೀಸ್ ಅನ್ನುವ ಬೋರ್ಡ್ ಬರೆಸಿಕೊಂಡು ದರ್ಪ ತೋರಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಆ ರೀತಿ ಬರೆಸಿದ್ದರೇ ಅವರ ವಿರುದ್ಧ 2022ರ ಸರ್ಕಾರದ ಸುತ್ತೋಲೆ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.





