ಕಳೆದ ಎರಡು ದಿನಗಳ ಹಿಂದೆ ದಾವಣಗೆರೆಯಲ್ಲಿ ಆನ್ಲೈನ್ ಬೆಟ್ಟಿಂಗ್ ಗೇಮ್ ಗೆ 18 ಲಕ್ಷ ಸಾಲ ಮಾಡಿಕೊಂಡಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ನಡೆದಿತ್ತು. ಇದೀಗ ರಾಜ್ಯದಲ್ಲಿ ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ ಹಾವಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕರ್ನಾಟಕ ಪೊಲೀಸ್ (ತಿದ್ದುಪಡಿ) ಬಿಲ್ 2025 ಕರಡು ರೂಪಿಸಿದೆ.

ಈ ಪ್ರಾಧಿಕಾರಕ್ಕೆ ಕಾನೂನು, ಸಾರ್ವಜನಿಕ ಆಡಳಿತ, ತಂತ್ರಜ್ಞಾನದ ಅನುಭವ ಹೊಂದಿರುವವರನ್ನು ರಾಜ್ಯ ಸರ್ಕಾರ ಅಧ್ಯಕ್ಷರಾಗಿ ನೇಮಿಸಲಿದೆ. ಜೊತೆಗೆ ಮೂವರು ಸದಸ್ಯರನ್ನು ನೇಮಕ ಮಾಡಲಿದೆ. ಓರ್ವ ಸದಸ್ಯ ಮಾಹಿತಿ ತಂತ್ರಜ್ಞಾನ, ಇನ್ನೊಬ್ಬ ಸದಸ್ಯ ಹಣಕಾಸು ಮತ್ತು ಮತ್ತೊಬ್ಬ ಸದಸ್ಯ ಸಮಾಜ ಕಲ್ಯಾಣದಲ್ಲಿ ಅನುಭವ ಹೊಂದಿರುವವರಾಗಿರಲಿದ್ದಾರೆ ಎಂದು ತಿಳಿದುಬಂದಿದೆ.

ಈ ಹೊಸ ಪ್ರಸ್ತಾಪಿತ ಮಸೂದೆ ಪ್ರಕಾರ ರಾಜ್ಯ ಸರ್ಕಾರ ಕರ್ನಾಟಕ ಆನ್​ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ ನಿಯಂತ್ರಣ ಪ್ರಾಧಿಕಾರವನ್ನು ರಚನೆ ಮಾಡಲಿದೆ.‌ ಈ ಪ್ರಾಧಿಕಾರ ಹೊಸ ಕಾನೂನಿನಂತೆ ನಿಯಮಗಳ ಜಾರಿ, ಅನುಪಾಲನೆ, ಆನ್​ಲೈನ್ ಗೇಮಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ನಿಯಂತ್ರಣ, ನಿಗಾ ಇಡಲಿದೆ.

ಉಲ್ಲಂಘನೆ ಮಾಡಿದ್ದಲ್ಲಿ ಶಿಕ್ಷೆ ಏನು ಗೊತ್ತಾ

ಮಸೂದೆ ಪ್ರಕಾರ ಕಾನೂನು ಉಲ್ಲಂಘಿಸುವವರ ಮೇಲೆ ಕಠಿಣ ಶಿಕ್ಷೆ ವಿಧಿಸುವ ನಿಯಮ ರೂಪಿಸಲಾಗಿದೆ. ನೊಂದಾಯಿತವಲ್ಲದ ವೇದಿಕೆಗಳ ಮೂಲಕ ಗೇಮ್ಸ್ ಆಫ್ ಚಾನ್ಸ್ ಆಧಾರಿತ ಆನ್​ಲೈನ್ ಬೆಟ್ಟಿಂಗ್ ನಡೆಸುವ ವ್ಯಕ್ತಿ, ಸಂಸ್ಥೆ 3 ವರ್ಷ ವರೆಗಿನ ಸೆರೆಮನೆವಾಸ ಹಾಗೂ 1 ಲಕ್ಷವರೆಗೆ ದಂಡ ವಿಧಿಸುವ ಅವಕಾಶ ಇದೆ. ನಿರಂತರ ನಿಯಮ ಉಲ್ಲಂಘಿಸುವ ವ್ಯಕ್ತಿ, ಸಂಸ್ಥೆ ಮೇಲೆ 5 ಲಕ್ಷ ರೂ. ವರೆಗೆ ದಂಡ ವಿಧಿಸಬಹುದಾಗಿದೆ.

Leave a Reply

Your email address will not be published. Required fields are marked *