• ಹೊಸ ಪಡಿತರ ಚೀಟಿಗೆ ಇವರು ಅರ್ಜಿ ಸಲ್ಲಿಸಬಹುದು

𝗦𝗔𝗧𝗛𝗬𝗔𝗦𝗛𝗢𝗗𝗛𝗔 𝗡𝗘𝗪𝗦 :ರಾಜ್ಯದ ಅನೇಕ ಜನರು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ.ಎಲ್ಲಾ ಅರ್ಜಿಯನ್ನು ಪರಿಶೀಲಿಸಿ ಏಪ್ರಿಲ್ 1ರಿಂದ ಹೊಸ ಪಡಿತರ ವಿತರಣೆ ಮಾಡಲಾಗುತ್ತದೆ ಎಂದು ರಾಜ್ಯ ಆಹಾರ ಇಲಾಖೆ ಮಾಹಿತಿ ನೀಡಿದೆ.ಪಡಿತರ ಚೀಟಿಗಗೆ ಬಂದಿರುವ 2,95,986 ಅರ್ಜಿಗಳನ್ನು ಮಾರ್ಚ್ 31ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

  • ಹೊಸ ಪಡಿತರ ಚೀಟಿಗೆ ಇವರು ಅರ್ಜಿ ಸಲ್ಲಿಸಬಹುದು
  • ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
  • ಈಗಾಗಲೇ ಪಡಿತರ ಚೀಟಿಯನ್ನು ಹೊಂದಿರಬಾರದು.
  • ಹೊಸದಾಗಿ ಮದುವೆಯಾದ ದಂಪತಿಗಳು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಬಹುದು
  • ಕುಟುಂಬದ ಆದಾಯದ ಆಧಾರದ ಮೇಲೆ ಯಾವ ಪಡಿತರ ಚೀಟಿ ನೀಡಬೇಕು ಎನ್ನುವುದನ್ನು ನಿರ್ಧರಿಸಲಾಗುತ್ತದೆ.

ನೀವು https://ahara.kar.nic.inನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

Leave a Reply

Your email address will not be published. Required fields are marked *