ಕನ್ನಡ ಶ್ರೇಷ್ಠ ಹಿರಿಯ ನಟ ಅನಂತ್ ನಾಗ್ ಅವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ಗೌರವ ಘೋಷಣೆ ಮಾಡಿದೆ. ಹಲವಾರು ವರ್ಷಗಳಿಂದ ಕನ್ನಡಿಗರ ಆಸೆ ಕೂಡ ಹೌದು. ಅನಂತ್‌ನಾಗ್ ಅಂತಹ ಮೇರು ನಟನಿಗೆ ತಡವಾಗಿಯಾದರೂ ಪದ್ಮ ಭೂಷಣ ಪ್ರಶಸ್ತಿ ಸಿಕ್ಕಿದೆ. ಭಾರತದ ಅತ್ಯಂತ ಶ್ರೇಷ್ಠ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಭೂಷಣ ಸಿಕ್ಕಿರುವ ಅವರ ಅಭಿಮಾನಿಗಳಿಗೆ, ಕನ್ನಡಿಗರಿಗೆ ಹೆಮ್ಮೆ ಎನಿಸಿದೆ.ಇನ್ನು ಅನಂತ್ ನಾಗ್ ಅವರಿಗೆ ಪದ್ಮಭೂಷಣ ಘೋಷಣೆಯಾದ ಹಿನ್ನಲೆಯಲ್ಲಿ ಚಿತ್ರರಂಗದ ನಟ ನಟಿಯರು ಹಾಗೂ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.
ಬಿಗ್ ಬಾಸ್ ಫಿನಾಲೆ ವೇದಿಕೆಯಲ್ಲಿ ಕಿಚ್ಚ ಸುದೀಪ್ ಅಭಿನಂದನೆ
‘ಅನಂತ್ ನಾಗ್ ಅವರಿಗೆ ಪದ್ಮಭೂಷಣ ಬಂದಿದೆ. ಇದು ಹಲವು ವರ್ಷಗಳ ಕೋರಿಕೆ ಆಗಿತ್ತು. ಈ ಕೋರಿಕೆ ಈಡೇರಿದೆ. ಬಹಳ ಲೇಟ್ ಆಗಿ ಬಂದಿದೆ. ಲೇಟ್ ಆಗ್ ಬಂದ್ರೂ ಲೇಟೆಸ್ಟ್ ಆಗಿದೆ’ ಎಂದು ಸುದೀಪ್ ಅವರು ಬಿಗ್ ಬಾಸ್ ವೇದಿಕೆ ಮೇಲೆ ಅನಂತ್ ನಾಗ್ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.