
ರಾಜ್ಯದಲ್ಲಿ ಗಂಭೀರ ಖಾಯಿಲೆಯಿಂದ ಬಳಲುತ್ತಿರುವಂತ ರೋಗಿಗಳಿಗೆ ದಯಾಮರಣಕ್ಕೆ ಅವಕಾಶ ನೀಡಿ ಸರ್ಕಾರ ಆದೇಶಿಸಿದೆ.ಈ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದ್ದು,

ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದು, ಚೇತರಿಸಿಕೊಳ್ಳದೇ ಜೀವನಪೂರ್ತಿ ಸಂಕಷ್ಟ ಅನುಭವಿಸುವ ಸ್ಥಿತಿಯಲ್ಲಿದ್ದವರಿಗೆ ದಯಾಮರಣಕ್ಕೆ ಅವಕಾಶವನ್ನು ನೀಡಿದೆ.ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಈ ಆದೇಶವನ್ನು ಆರೋಗ್ಯ ಇಲಾಖೆ ಮಾಡಿದೆ.

ಈಗ ಮಾರಕ ರೋಗದಿಂದ ಬಳಲುತ್ತಿರುವವರು ದಯಾಮರಣದ ಅವಕಾಶವನ್ನು ಕರ್ನಾಟಕದಲ್ಲಿ ನೀಡಲಾಗಿದೆ.ರೋಗಿಯು ಘನತೆಯಿಂದ ಸಾಯುವ ಹಕ್ಕಿನ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನವನ್ನು ಅನುಷ್ಠಾನಗೊಳಿಸಲು ರಾಜ್ಯ ಆರೋಗ್ಯ ಇಲಾಖೆ ಐತಿಹಾಸಿಕ ಆದೇಶ ಹೊರಡಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಪ್ರಕಟಿಸಿದ್ದಾರೆ.


