- ಪೋಲೀಸರ ಮಿಂಚಿನ ಕಾರ್ಯಾಚರಣೆಗೆ ಮೆಚ್ಚುಗೆ
ತೀರ್ಥಹಳ್ಳಿ :ತಾಲೂಕಿನ ಕೈಮರ ಬಳಿಯ ಪ್ಲಾಂಟೇಶನ್ ಒಂದರಲ್ಲಿ ರಾತ್ರಿ 11 ಗಂಟೆ ಸಮಯದಲ್ಲಿ ಹಣವನ್ನು ಇಟ್ಟು ಇಸ್ಪೀಟ್ ಆಟ ಆಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ತೀರ್ಥಹಳ್ಳಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಹಣದ ಸಮೇತ 6 ಮಂದಿಯನ್ನು ಪೊಲೀಸರು ಬಂಧಿಸಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.




