

ಶಿವಮೊಗ್ಗ:ನಗರದಲ್ಲಿ ನಡೆದ ಅಮ್ಮದ್ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಆರೋಪಿ ರೌಡಿಶೀಟರ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕಾರಣ ಆತ್ಮರಕ್ಷಣೆಗಾಗಿ ಫೈರಿಂಗ್ ನಡೆಸಲಾಗಿದೆ.ಎಂದು ತಿಳಿದು ಬಂದಿದೆ.ರೌಡಿಶೀಟರ್ ಅಕ್ಟರ್ (21) ಕಾಲಿಗೆ ಗುಂಡು ತಗುಲಿದ್ದು,

ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಕ್ಟರ್‌ನನ್ನು ಬಂಧಿಸಲು ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿದ್ದರು. ದೊಡ್ಡಪೇಟೆ ಠಾಣೆ ಪಿಎಸ್‌ಐ ಮಂಜುನಾಥ್ ಅಕ್ಟರ್‌ಗೆ ಶರಣಾಗುವಂತೆ ಸೂಚಿಸಿದ್ದಾರೆ. ಈ ವೇಳೆ ಅಕ್ಟರ್ ಪೊಲೀಸ್ ಸಿಬ್ಬಂದಿ ಚಂದ್ರನಾಯ್ಕ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಇದ್ರಿಂದ ಆತ್ಮರಕ್ಷಣೆಗಾಗಿ ಅಕ್ಟರ್ ಮೇಲೆ ಗುಂಡು ಹಾರಿಸಲಾಗಿದೆ.


