ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯ ಇಂದು ಗುಜರಾತ್​ನ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ಸೆಣಸಲಿವೆ. ಆರ್​ಸಿಬಿ ಗೆಲುವಿಗಾಗಿ ಕರ್ನಾಟಕದಾದ್ಯಂತ ಅಭಿಮಾನಿಗಳ ಹಾರೈಕೆ, ಪ್ರಾರ್ಥನೆ ಸಲ್ಲಿಕೆಯಾಗುತ್ತಿದೆ.

ಈ ಸಂದರ್ಭದಲ್ಲಿ, ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಲ್ಲಿ ಪೊಲೀಸರಿಗೆ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಸಂಭ್ರಮಾಚರಣೆ ನೆಪದಲ್ಲಿ ಯಾರೂ ಅತಿರೇಕದ ವರ್ತನೆ ತೋರದಂತೆ, ಒಂದು ವೇಳೆ ತೋರಿದರೆ ಕ್ರಮ ಕೈಗೊಳ್ಳುವಂತೆ ಮುನ್ನೆಚ್ಚರಿಕೆ ವಹಿಸಲು ಪೊಲೀಸ್ ಕಮಿಷನರ್ ದಯಾನಂದ್ ಸೂಚನೆ ನೀಡಿದ್ದಾರೆ.

Oplus_131072

ಎಲ್ಲ ಡಿಸಿಪಿಗಳು ಹಾಗೂ ಎಸಿಪಿಗಳಿಗೆ ನಿರ್ದೇಶನ ನೀಡಲಾಗಿದೆ.ಸ್ಕ್ರೀನ್​ ಅಳವಡಿಸಲು ಪೊಲೀಸರ ಅನುಮತಿ ಅಗತ್ಯಬೆಂಗಳೂರಿನಲ್ಲಿ ಸ್ಕ್ರೀನ್ ಅಳವಡಿಸಿರುವ ಕಡೆ ಪೊಲೀಸರ ಕಣ್ಗಾವಲು ಇರಲಿದೆ. ಪೊಲೀಸರ ಅನುಮತಿ ಪಡೆಯದೆ ಸ್ಕ್ರೀನ್​​ ಅಳವಡಿಕೆ ಮಾಡುವಂತಿಲ್ಲ

Oplus_131072

ಎಂದು ಸೂಚನೆ ನೀಡಲಾಗಿದೆ.ಪಬ್, ಕ್ಲಬ್, ರೆಸ್ಟೋರೆಂಟ್​​​ಗಳು ಅವಧಿ ಮೀರಿ ಕಾರ್ಯಾಚರಣೆ ಮಾಡುವಂತಿಲ್ಲ. ರೆಸ್ಟೋರೆಂಟ್​​​ಗಳನ್ನು ನಿಗದಿತ ಸಮಯಕ್ಕೆ ಬಂದ್ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.

Leave a Reply

Your email address will not be published. Required fields are marked *