ಚಿಕ್ಕಮಗಳೂರು :ಕಾಡಾನೆಗಳು ಬೀಡುಬಿಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಚಿಕ್ಕಮಗಳೂರು ತಾಲೂಕಿನ ತುಡುಕೂರು, ಆಲ್ದೂರುಪುರ, ಹೊಸಹಳ್ಳಿ, ತೋರಣಮಾವು ಮತ್ತು ಚಿತ್ತುವಳ್ಳಿ ಸೇರಿದಂತೆ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಿದೆ. ಶನಿವಾರ (ನ.09) ರಂದು ಮಧ್ಯಾಹ್ನ ಕಾಫಿ ತೋಟದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿ ತುಳಿದು ಕಾಡಾನೆ ಮೃತಪಟ್ಟಿತ್ತು. ಸಾವನ್ನಪ್ಪಿದ ಸಲಗದ ಬಳಿ ಇರುವ 23 ಕಾಡಾನೆಗಳು ಬೀಡು ಬಿಟ್ಟಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.










