ದೇಶಾದ್ಯಂತ ಮುಂಗಾರು ಮಳೆ ಆರ್ಭಟಿಸಿ ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದೆ. ಕೆಲವು ದಿನಗಳ ಬಳಿಕ ಮತ್ತೆ ಮಳೆ ಚುರುಕು ಪಡೆದು, ಮತ್ತೆ ಇದೀಗ ತಗ್ಗಿದೆ. ಇನ್ನು ಮುಂದಿನ 4 ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ತಿಳಿಸಿದೆ.










