Oplus_131072

ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಕೆಲವೆಡೆ ಮಳೆಯಾಗುತ್ತಿದ್ದು, ಏ 20,ರಂದು ಮತ್ತೆ ಮಳೆಯಾಗುವ ಮುನ್ಸೂಚನೆ ಇದೆ. ಅಕಾಲಿಕ ಮಳೆ ಕೆಲವೆಡೆ ಜನ ಜೀವನದ ಮೇಲೆ ಪರಿಣಾಮ ಬೀರಿದೆ. ಕರ್ನಾಟಕದ ಕರಾವಳಿಯ ಪೈಕಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವಡೆ ಹಗುರದಿಂದ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ

. ಉತ್ತರ ಒಳನಾಡಿನ ಪೈಕಿ ಬೆಳಗಾವಿ, ಹಾವೇರಿ, ಗದಗ, ಧಾರವಾಡ ಹಾಗೂ ಬಾಗಲಕೋಟೆಯಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಇನ್ನ ದಕ್ಷಿಣ ಒಳನಾಡಿನ ಭಾಗದಲ್ಲಿ ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ,

ಬೆಂಗಳೂರು ನಗರ, ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 5 ದಿನಗಳ ವರೆಗೆ ಅಂದರೆ ಏಪ್ರಿಲ್ 25ರ ಶುಕ್ರವಾರ ವರೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *