
ರಾಜ್ಯದಲ್ಲಿ ಕೊಡಗು, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಗುರುವಾರ ಮಳೆಯಾಗಿತ್ತು. ಅದೇ ರೀತಿ ಮುಂದಿನ ಏ.16ರವರೆಗೆ ಉತ್ತಮ ಮಳೆಯಾಗುವ ಮುನ್ಸೂಚನೆ (Karnataka Weather) ಸಿಕ್ಕಿದೆ.

ಇನ್ನು ಏ.12ರಂದು ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ,

ಧಾರವಾಡ, ಹಾವೇರಿ, ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


