ಮುಂಗಾರು ಮಳೆ ದೇಶಾದ್ಯಂತ ಚುರುಕುಗೊಂಡಿದೆ. ಕಳೆದ ನಾಲ್ಕು ದಿನಗಳಿಂದ ದಕ್ಷಿಣ ಭಾಗಗಳಲ್ಲೂ ತೀವ್ರ ರೂಪದಲ್ಲಿ ಸುರಿಯುತ್ತಿದೆ. ಬೆಂಗಳೂರು, ಕರ್ನಾಟಕ, ತಮಿಳುನಾಡು ಸೇರಿದಂತೆ ದಕ್ಷಿಣ ರಾಜ್ಯಗಳಲ್ಲಿ ಮಳೆ ಹೆಚ್ಚಾಗಿದೆ.

ಈಗಾಗಲೇ ಭಾರಿ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆ ಅರುಣಾಚಲ ಪ್ರದೇಶ, ಅಸ್ಸಾಂ, ಮಣಿಪುರ ಸೇರಿದಂತೆ ವಿವಿಧ ಭಾಗಗಳಲ್ಲಿ ಪ್ರವಾಹ ಸ್ಥಿತಿ ಉಂಟು ಮಾಡಿದೆ.ಭಾರೀ ಮಳೆಗೆ ಕೆಲ ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.

ಮುಂದಿನ 5 ದಿನ ಭಾರೀ ಮಳೆ ಮುಂದುವರಿಯಲಿದೆ.ನಿರಂತರವಾಗಿ ಬದಲಾದ ಹವಾಮಾನ ವೈಪರೀತ್ಯಗಳ ಪ್ರಭಾವದಿಂದಾಗಿ ಮಲೆನಾಡಿನ ಹಲವೆಡೆ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a Reply

Your email address will not be published. Required fields are marked *