Oplus_131072

ಕನ್ನಡ ವಾಹಿನಿಯ ಜನಪ್ರಿಯ ಕಾಮಿಡಿ ಕಾರ್ಯಕ್ರಮ ‘ಕಾಮಿಡಿ ಕಿಲಾಡಿ’ ಸೀಸನ್-3ರ ವಿಜೇತ, ಪ್ರತಿಭಾನ್ವಿತ ಕಲಾವಿದ ರಾಕೇಶ್ ಪೂಜಾರಿ ಅವರು ನಿಧನರಾಗಿದ್ದಾರೆ. ರಾಕೇಶ್ ಅವರ ಆಕಸ್ಮಿಕ ಸಾವು ಅವರ ಅಭಿಮಾನಿಗಳಿಗೆ ಮಾತ್ರವಲ್ಲ, ಕಿರುತೆರೆಯ ಸಹ ಕಲಾವಿದರಿಗೂ ಆಘಾತವನ್ನುಂಟು ಮಾಡಿದೆ.

Oplus_131072

ದಿನಾಂಕ 11 ಮೇ 2025ರಂದು ತಮ್ಮ ಊರಿನಲ್ಲಿ ನಡೆದ ಮದುವೆಯ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ರಾಕೇಶ್, ಎಂದಿನಂತೆ ತಮ್ಮ ಉತ್ಸಾಹದಿಂದ ಡ್ಯಾನ್ಸ್ ಮಾಡಿ, ಎಲ್ಲರ ಜೊತೆ ಸಂತೋಷದ ಕ್ಷಣಗಳನ್ನು ಕಳೆದಿದ್ದರು. ಆದರೆ, ಕಾರ್ಯಕ್ರಮದ ಬಳಿಕ ರಾಕೇಶ್ ಅವರಿಗೆ ಆಕಸ್ಮಿಕವಾಗಿ ರಕ್ತದೊತ್ತಡ ಕಡಿಮೆಯಾಗಿದೆ ಎಂದು ತಿಳಿದುಬಂದಿದೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದರು ಎಂದು ವೈದ್ಯರು ದೃಢಪಡಿಸಿದ್ದಾರೆ.ಇನ್ನು ಇವರ ಅಕಾಲಿಕ ಮರಣಕ್ಕೆ ಕನ್ನಡ ಚಿತ್ರರಂಗ ಹಾಗೂ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

Leave a Reply

Your email address will not be published. Required fields are marked *