- ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಂದ ಆದೇಶ ಜಾರಿಗೆ
- ಸಂಪೂರ್ಣ ಸುದ್ದಿಗೆ ಲಿಂಕ್ ಒತ್ತಿ

ಎರಡು ಹಂತಗಳಲ್ಲಿ ನಡೆದ ಸಾರ್ವತ್ರಿಕ ಲೋಕಸಭೆ ಚುನಾವಣೆ-2024 ರ ಹಿನ್ನೆಲೆಯಲ್ಲಿ ಮತ ಎಣಿಕೆಯು ಜೂನ್.4ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಸುಗಮವಾಗಿರುವಂತೆ ನೋಡಿಕೊಳ್ಳಲು ಜೂನ್.04 ರ ಬೆಳಗ್ಗೆ 6 ರಿಂದ ಜೂನ್.05 ರ ಬೆಳಗ್ಗೆ 6.00 ಗಂಟೆಯವರೆಗೆ 144 ಸೆಕ್ಷನ್ ಅಡಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.ಯಾವುದೇ ಮೆರವಣಿಗೆ, ಸಭೆ, ಸಮಾರಂಭಗಳು, ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶ ನಡೆಸುವಂತಿಲ್ಲ. ಶಸ್ತ್ರ, ಕುಡುಗೋಲು, ಖಡ್ಗ, ಚೂರಿ, ಬಂದೂಕು, ಕೋಲು ಅಥವಾ ದೇಹಕ್ಕೆ ಅಪಾಯ ಉಂಟು ಮಾಡಬಹುದಾದ ಮಾರಕಾಸ್ತ್ರಗಳನ್ನು ಒಯ್ಯುವಂತಿಲ್ಲ. ಯಾವುದೇ ವಿನಾಶಕಾರಿ ವಸ್ತು ಇಲ್ಲವೇ ಸ್ಪೋಟಕವಸ್ತು ಒಯ್ಯತಕ್ಕುದ್ದಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.ಈ ನಿಷೇಧಾಜ್ಞೆಯು ಸದುದ್ದೇಶದ ಕಾರ್ಯಗಳಾದ ಶವಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ ನಡೆಸಲು ಹಾಗೂ ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ಪ್ರಾರ್ಥನೆಗೆ ತೆರುಳುವವರಿಗೆ ಹಾಗೂ ಇನ್ನಿತರ ಸಮಾರಂಭಗಳನ್ನು ನಡೆಸಲು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಂದ ಅನುಮತಿ ಪಡೆದವರಿಗೆ ಅನ್ವಯಿಸುವುದಿಲ್ಲ ಎಂದು ಹೇಳಿದ್ದಾರೆ.


