
ಮಗುವನ್ನ ಕತ್ತು ಸೀಳಿ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡ ಪಾಪಿ ತಾಯಿ
ಶಿವಮೊಗ್ಗ: ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್‌ನ ಶೌಚಾಲಯಲದಲ್ಲಿ ಮಗುವಿನ ಶವ ಪತ್ತೆಯಾದ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತಾಯಿಯೇ 1 ದಿನದ ಗಂಡು ಮಗವನ್ನು ಕತ್ತು ಸೀಳಿ ಕೊಲೆ ಮಾಡಿರುವುದು ತನಿಖೆಯಲ್ಲಿ ಬಯಲಾಗಿದೆ.

ಆ.16ರಂದು ಮೆಗ್ಗಾನ್ ಆಸ್ಪತ್ರೆಯ ಹೆರಿಗೆ ವಾರ್ಡ್‌ನ ಶೌಚಾಲಯಲದಲ್ಲಿ ಮಗುವಿನ ಶವ ಪತ್ತೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ದೊಡ್ಡಪೇಟೆ ಪೊಲೀಸರು ತನಿಖೆ ನಡೆಸಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ತಿಮ್ಲಾಪುರ ಗ್ರಾಮದ ಶೈಲಾ ಎಂಬಾಕೆಯನ್ನು ಬಂಧಿಸಿದ್ದಾರೆ.

ಶೌಚಾಲಯದಲ್ಲಿ ಒಬ್ಬಳೇ ನಾರ್ಮಲ್ ಹೆರಿಗೆ ಮಾಡಿಕೊಂಡಿದ್ದು. ಬಳಿಕ ಶಸ್ತ್ರಚಿಕಿತ್ಸೆಗೆ ಬಳಸುವ ಬ್ಲೇಡ್ ನಿಂದ ಮಗುವಿನ ಕತ್ತು ಕೊಯ್ದು ಕೊಲೆ ಮಾಡಿರುವುದಾಗಿ ದೊಡ್ಡಪೇಟೆ ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾಳೆ. ಶೈಲಾ ಹೇಳಿಕೆ ಮತ್ತು ಕೆಲ ಸಾಕ್ಷಿಗಳ ಆಧಾರ ಮೇಲೆ ದೊಡ್ಡಪೇಟೆ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.




