

ಶಿವಮೊಗ್ಗ : ಖ್ಯಾತ ಸ್ತ್ರೀರೋಗ ತಜ್ಞೆ ಡಾ.ಜಯಶ್ರೀ ಹೊಮ್ಮರಡಿ (55) ಹಾಗೂ ಅವರ ಪುತ್ರ ಆಕಾಶ್ ಹೊಮ್ಮರಡಿ (34) ಇಲ್ಲಿನ ಅಶ್ವತ್ಥ ನಗರದ ಅವರ ನಿವಾಸದಲ್ಲಿ ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಡಾ.ಜಯಶ್ರೀ ನೆಲ ಮಹಡಿಯ ಕೊಠಡಿಲ್ಲಿ ನೇಣು ಬಿಗಿದುಕೊಂಡಿದ್ದು, ಆಕಾಶ್ ಶವ ಮೊದಲ ಮಹಡಿ ಕೊಠಡಿಯಲ್ಲಿ ಪತ್ತೆಯಾಗಿದೆ. ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

