- ಸಾಗರ ತಾಲ್ಲೂಕು ಕಾನಲೆ ಕ್ರಾಸ್ ಬಳಿ ಟಾಟಾ ಗೂಡ್ಸ್ ನಲ್ಲಿ ಮದ್ಯ ಸಾಗಾಟ

ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಮಾ. 28 ರ ರಾತ್ರಿ ಸಾಗರ ಮಾರ್ಗವಾಗಿ ಬರುತ್ತಿದ್ದ ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಅಂದಾಜು ರೂ. 2,23,046 ಮೌಲ್ಯದ ಪರವಾನಗಿ ಇಲ್ಲದ ಒಟ್ಟು 51.84 ಲೀಟರ್ ಅಕ್ರಮ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ, ಶಿವಮೊಗ್ಗ ಹಾಗೂ ಅಬಕಾರಿ ಉಪ ಅಧೀಕ್ಷಕರು, ಸಾಗರ ಉಪ ವಿಭಾಗರವರ ಮಾರ್ಗದರ್ಶನದಲ್ಲಿ ದಿನಾಂಕ 28.03.2024 ರಂದು ರಾತ್ರಿ 09.45 ಕ್ಕೆ ಸಾಗರ ತಾಲ್ಲೂಕು ಕಾನಲೆ ಕ್ರಾಸ್ ಬಳಿ ರಸ್ತೆಗಾವಲು ನಡೆಸುತ್ತಿದ್ದಾಗ ಟಾಟಾ ಏಸ್ ಗೂಡ್ಸ್ ನಾಲ್ಕು ಚಕ್ರದ ವಾಹನವನ್ನು ತಪಾಸಣೆ ಮಾಡುವಾಗ ಅಕ್ರಮ ಮದ್ಯ ಸಿಕ್ಕಿದೆ.ಕರ್ನಾಟಕ ಅಬಕಾರಿ ಕಾಯಿದೆ 1965 ರ ಕಲಂ 11,14, ರೀತ್ಯಾ ಅಪರಾಧವಾಗಿದ್ದು, ಇದೇ ಕಾಯಿದೆ ಅಡಿ 32(1), 38(ಎ), ರ ರೀತ್ಯಾ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಆರೋಪಿತನು ದಾಳಿ ವೇಳೆ ತಲೆಮರೆಸಿಕೊಂಡಿದ್ದು, ಮೇಲ್ಕಾಣಿಸಿದ ಮುದ್ದೆಮಾಲು ಹಾಗೂ ವಾಹನವನ್ನು ಪಂಚರ ಸಮಕ್ಷಮ ಪಂಚನಾಮೆಯಡಿಯಲ್ಲಿ ಜಫ್ತುಪಡಿಸಿಕೊಂಡು ಆರೋಪಿ ಹಾಗೂ ವಾಹನದ ಮಾಲೀಕರ ವಿರುದ್ಧ ಮೊಕದ್ದಮೆ ದಾಖಲು ಮಾಡಲಾಗಿರುತ್ತದೆ. ವಾಹನ ಮತ್ತು ಮುದ್ದೆಮಾಲಿನ ಅಂದಾಜು ಮೌಲ್ಯ 2,23,046 ರೂಗಳಾಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.