
ಶಿವಮೊಗ್ಗ : ಆರೋಪಿ ಬಂಧಿಸಲು ತೆರಳಿದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಹಿನ್ನೆಲೆಯಲ್ಲಿ ಮಂಜನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಹೊಳೆ ಹೊನ್ನೂರು ಪಿಐಲಕ್ಷ್ಮಿಪತಿ ಆರೋಪಿ ಮಂಜನ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ.ಈ ಘಟನೆಯಲ್ಲಿ ಕಾನ್ಸ್ಟೇಬಲ್ ಪಿಸಿ ಪ್ರಕಾಶ್ ಅವರಿಗೆ ಗಾಯಗಳಾಗಿದ್ದು ಆರೋಪಿಯನ್ನು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ

. ಮೇ 9ರಂದು ಹೇಮಣ್ಣ ಎಂಬುವವರನ್ನು ಹತ್ಯೆ ಮಾಡಲಾಗಿತ್ತು. ಚಳಿ ಮಂಜ ಸೇರಿದಂತೆ ಮೂವರು ಹೇಮಣ್ಣರನ್ನು ಕೊಲೆ ಮಾಡಿದ್ದರು. ಇದೀಗ ಚಳಿ ಮಂಜಣ್ಣನ್ನು ಬಂಧಿಸಲು ಹೋದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಹಾಗಾಗಿ ಆತನ ಕಾಲಿಗೆ ಫೈರಿಂಗ್ ನಡೆಸಿ ಬಂಧಿಸಲಾಗಿದೆ.



