ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಕೊಡಚಾದ್ರಿ ಬೆಟ್ಟಕ್ಕೆ ತೆರಳುತ್ತಿದ್ದ ಜೀಪ್ ಒಂದು ಇಂದು ಬೆಳಿಗ್ಗೆ ಪಲ್ಟಿಯಾದ ಘಟನೆ ನಡೆದಿದೆ. ಕೊಲ್ಲೂರಿನಿಂದ ಕೊಡಚಾದ್ರಿಯ ಕಡೆಗೆ ಪ್ರಯಾಣಿಸುತ್ತಿದ್ದ ಕೇರಳ ಮೂಲದ ಎಂಟು ಮಂದಿ ಭಕ್ತರನ್ನು ಹೊತ್ತ ಜೀಪ್, ಚಾಲಕನ ಅತಿ ವೇಗದ ಹಿನ್ನೆಲೆಯಲ್ಲಿ

ನಿಯಂತ್ರಣ ತಪ್ಪಿ ಪಲ್ಟಿಯಾದ ಜೀಪ್ ನಿಟ್ಟೂರು-ಕಟ್ಟಿನಹೊಳೆ ಮಾರ್ಗದ ಕುಂಬಳೆ ಗ್ರಾಮದ ಬಳಿ ಅಪಘಾತವಾಗಿದೆ.ಅಪಘಾತದಲ್ಲಿ ಭಕ್ತರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಜೀಪ್ ಭಾಗಶಃ ಜಖಂಗೊಂಡಿದ್ದು, ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *