
ಶಿವಮೊಗ್ಗ : ನಗರದ ಪಶುವೈದ್ಯಕೀಯ ಕಾಲೇಜು ರಸ್ತೆಯಲ್ಲಿ ರೈಲಿಗೆ ತಲೆಕೊಟ್ಟು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ.ಮೃತಪಟ್ಟ ವ್ಯಕ್ತಿಯನ್ನು ಈಶ್ವರ(30) ಎಂದು ಗುರುತಿಸಲಾಗಿದ್ದು,

ಇವರು ಅಶೋಕನಗರ ನಿವಾಸಿಯಾಗಿದ್ದು, ಸರ್ಕಾರಿ ಆಯುರ್ವೇದ ಕಾಲೇಜು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮದ್ಯವ್ಯಸನಿಯಾಗಿದ್ದರು

ಎಂದು ತಿಳಿದು ಬಂದಿದೆ. ರೈಲ್ವೆ ಪೊಲೀಸರು ಸ್ಥಳಕ್ಕೆ ತೆರಳಿ ರೈಲ್ವೆಹಳಿಯ ಮೇಲೆ ಬಿದ್ದ ಮೃತದೇಹವನ್ನು ತೆರವುಗೊಳಿಸಿ ತನಿಖೆ ಕೈಗೊಂಡಿದ್ದು, ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


