
ಜುಲೈ 14 ರಂದು ದೇಶದ 2 ನೇ ಅತಿ ಉದ್ದದ ಸಿಗಂದೂರು ಕೇಬಲ್ ಸೇತುವೆ ಲೋಕಾರ್ಪಣೆಗೊಳ್ಳಲಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಮಾಹಿತಿ ನೀಡಿದ್ದಾರೆ.ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಇರುವ ಪ್ರಸಿದ್ಧ ಯಾತ್ರಾಸ್ಥಳ ಸಿಗಂದೂರು ಸೇತುವೆಗೆ ಜುಲೈ 14 ರಂದು ಚಾಲನೆ ಸಿಗಲಿದ್ದು, ಕೇಂದ್ರ ಸಚಿವ ನಿತಿನ್ ಗಡ್ಕರಿ, ಸಂಸದ ಪ್ರಹ್ಲಾದ್ ಜೋಶಿ ಭಾಗಿಯಾಗಲಿದ್ದಾರೆ. ಈ ಸೇತುವೆಗೆ ಸಿಗಂಧೂರು ಚೌಡೇಶ್ವರಿ ದೇವಿ ಹೆಸರು ಇಡಲು ರಾಜ್ಯ ಸರ್ಕಾರ ಶಿಫಾರಸು ಮಾಡಲಿ ಎಂದು ಆಗ್ರಹಿಸಿದರು.

ಬರೋಬ್ಬರಿ 470 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ದೇಶದ 2 ನೇ ಅತಿ ಉದ್ದದ ಕೇಬಲ್ ಆಧಾರಿತ ಸೇತುವೆ ಇದಾಗಿದೆ. ಈ ಸೇತುವೆಯ ಕಾಮಗಾರಿ 2020 ರ ಡಿಸೆಂಬರ್ ನಲ್ಲಿ ಆರಂಭವಾಗಿತ್ತು.

