
ರಾಜ್ಯ ಸರ್ಕಾರದಿಂದ ಸರ್ಕಾರಿ ಕಚೇರಿಗಳಲ್ಲಿ, ಕಚೇರಿಯ ಆವರಣಗಳಲ್ಲಿ ಧೂಮಪಾನ, ಇತರೆ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿಷೇಧಿಸಿ ಖಡಕ್ ಆದೇಶ ಹೊರಡಿಸಲಾಗಿದೆ.

ಹಾಗೂ ಕಛೇರಿಯ ಆವರಣದಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಆಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಈ ಹಿನ್ನಲೆಯಲ್ಲಿ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಪರೋಕ್ಷ ಧೂಮಪಾನದಿಂದ ಸಾರ್ವಜನಿಕರನ್ನು ಹಾಗೂ ಸರ್ಕಾರಿ ಸಿಬ್ಬಂದಿಗಳನ್ನು ರಕ್ಷಿಸುವ ಉದ್ದೇಶದಿಂದ ಯಾವುದೇ ಸರ್ಕಾರಿ ನೌಕರನು ಸರ್ಕಾರಿ ಕಛೇರಿಗಳಲ್ಲಿ ಹಾಗೂ ಕಛೇರಿ ಆವರಣದಲ್ಲಿ ಧೂಮಪಾನ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳ ಸೇವನೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಸಂಬಂಧ ಎಚ್ಚರಿಕೆಯ ಫಲಕವನ್ನು ಕಛೇರಿಯ ಸೂಕ್ತ ಸ್ಥಳಗಳಲ್ಲಿ ಪ್ರದರ್ಶಿಸತಕ್ಕದ್ದು,

ಈ ಸೂಚನೆಗಳನ್ನು ಉಲ್ಲಂಘಿಸಿ ಯಾವುದೇ ಸರ್ಕಾರಿ ನೌಕರ ಕಛೇರಿಯಲ್ಲಿ ಅಥವಾ ಕಛೇರಿಯ ಆವರಣದಲ್ಲಿ ಧೂಮಪಾನ ಮಾಡುವುದು ಮತ್ತು ಯಾವುದೇ ತಂಬಾಕು ಉತ್ಪನ್ನಗಳನ್ನು (ಗುಟ್ಕಾ, ಪಾನ್ ಮಸಾಲ, ಹೊಗೆಸೊಪ್ಪು ಇತ್ಯಾದಿ) ಸೇವಿಸುವುದು ಕಂಡುಬಂದಲ್ಲಿ ಅಂತಹ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.





