• ಅಂಕಿತಾ ಓದಿದ ಶಾಲೆಗೆ ಒಂದು ಕೋಟಿ ಅನುದಾನ ಘೋಷಣೆ

ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಭ್ಯಾಸ ಮಾಡಿ ರಾಜ್ಯಕ್ಕೆ ಮೊದಲ ರ್ಯಾಂಕ್‌ ಪಡೆದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರ ಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದ್ದಾರೆ. ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕುಮಾರಿ ಅಂಕಿತ ಹಾಗೂ ದ್ವಿತೀಯ Rank ಪಡೆದ ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸನ್ಮಾನಿಸಿದರು.ಮುಂದಿನ ಶಿಕ್ಷಣ ಉತ್ತಮವಾಗಲೆಂದು ಹರಸಿ ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ ಗೆ 3 ಲಕ್ಷ ರೂ.ಗಳ ನೆರವನ್ನು ಸಿಎಂ ಘೋಷಿಸಿದರು. ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ ಒಂದು ಕೋಟಿ ರೂ. ಹಾಗೂ ನವನೀತ್ ವ್ಯಾಸಂಗ ಮಾಡಿದ ಶಾಲೆಯ ಅಭಿವೃದ್ಧಿಗೆ 50 ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Leave a Reply

Your email address will not be published. Required fields are marked *