- ಮಕ್ಕಳೇ ಶುಭಾಶಯಗಳು ನಿಮಗೆ

ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 25 ರಿಂದ ಶುರುವಾಗಲಿದೆ. ಒಟ್ಟು 2750 ಕೇಂದ್ರಗಳಲ್ಲಿ ಏಪ್ರಿಲ್ 6ರವರೆಗೆ ಪರೀಕ್ಷೆಗಳು ನಡೆಯಲಿವೆ.ರಾಜ್ಯದಲ್ಲಿ ಈ ಬಾರಿ ಪರೀಕ್ಷೆಗೆ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ.ಈ ಪೈಕಿ 4,41,910 ಬಾಲಕರು, 4,28,058 ಬಾಲಕಿಯರಿದ್ದಾರೆ. ಒಟ್ಟು ವಿದ್ಯಾರ್ಥಿಗಳ ಪೈಕಿ 8.10 ಲಕ್ಷಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು (ರೆಗ್ಯ್ಲರ್), 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. 54,254 ವಿಶೇಷ ಚೇತನ ವಿದ್ಯಾರ್ಥಿಗಳಿದ್ದಾರೆ. ರಾಜ್ಯದಲ್ಲಿ ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ ವಿತರಣೆಗೆ ಸಿದ್ಧತೆಗಳು ಮಾಡಿಕೊಳ್ಳಲಾಗಿದೆ.

