• ಸತತ 20ಗಂಟೆ ರಕ್ಷಣಾ ಕಾರ್ಯಾಚರಣೆ ಯಶಸ್ವಿ

ಸತ್ಯಶೋಧ ನ್ಯೂಸ್ ಡೆಸ್ಕ್ : ಇಂಡಿ ತಾಲೂಕು ಲಚ್ಯಾಣ ಗ್ರಾಮದ ತೋಟದ ವಸ್ತಿಯಲ್ಲಿ ಆಟವಾಡಲು ಹೋದ ಪುಟ್ಟ ಬಾಲಕ ಸಾತ್ವಿಕ್ ತೆರೆದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ಎ.3 ಬುಧವಾರ ನಡೆದಿದ್ದು.ಲಚ್ಯಾಣ ಗ್ರಾಮದ ಸತೀಶ ಜುನಗೊಂಡ ಅವರ ಪುತ್ರ ಸಾತ್ವಿಕ್ ಮುಜಗೊಂಡ (14ತಿಂಗಳು ) ಇದೀಗ ಕರುನಾಡಿನ ಹಾರೈಕೆಯಂತೆ ಅದೃಷ್ಟವಶಾತ್ ಬದುಕಿ ಬಂದಿದ್ದಾನೆ.ಈ ವೇಳೆ ಸಾತ್ವಿಕ್ನನ್ನ ಆಂಬುಲೆನ್ಸ್ ನಲ್ಲಿ ಪ್ರಥಮ ಚಿಕಿತ್ಸೆ ನಂತರ ಬಿಜಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ವ್ಯವಸ್ಥೆ ಮಾಡಿದ್ದ ಹಿನ್ನಲೆ ಮಗುವನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾನೆ.ಇನ್ನು ಈ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಎಸ್ ಡಿ ಆರ್ ಎಫ್, ಹಾಗೂ ಎನ್ ಡಿ ಆರ್ ಎಫ್ ತಂಡ, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಹಾಗೂ ಅಧಿಕಾರಿಗಳಿಗೆ ಸಾರ್ವಜನಿಕರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *