

ಧರ್ಮಸ್ಥಳ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಆಸ್ತಿಗಾಗಿ ಅನನ್ಯ ಭಟ್ ಕಥೆ ಕಟ್ಟಿದ ಸುಜಾತಾ ಭಟ್ ಇದೀಗ ಎಲ್ಲವೂ ಸುಳ್ಳು ಎಂದು ಹೇಳಿದ್ದಾರೆ. ಇದರೊಂದಿಗೆ ಧರ್ಮಸ್ಥಳ ಪ್ರಕರಣದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದ್ದ ಸುಜಾತ್ ಭಟ್ ಮಗಳು ಅನನ್ಯಾ ಭಟ್ ನಾಪತ್ತೆ ಕೇಸ್ ಅಸಲಿ ವಿಚಾರ ಹೊರಬಂದಿದೆ.

ಇನ್‌ಸೈಟ್‌ರಶ್‌ಗೆ ಯೂಟ್ಯೂಬ್‌ಗೆ ನೀಡಿದ್ದ ಸಂದರ್ಶನದಲ್ಲಿ ಮಾತನಾಡಿದ ಸುಜಾತಾ ಭಟ್ ನಿಮ್ಮ ಮಗಳು ಅನ್ನೋ ಕತೆ ಸತ್ಯವೇ ಅಥವಾ ಸುಳ್ಳೇ ಎಂಬ ಪ್ರಶ್ನೆಗೆ ಉತ್ತರಿಸಿದ ಸುಜಾತಾ ಭಟ್, ಅನನ್ಯಾ ಭಟ್ ಅನ್ನೋ ಮಗಳು ಸುಳ್ಳು ಕತೆ, ಗಿರೀಶ್ ಮಟ್ಟೆಣ್ಣನವರ್, ಜಯಂತ್ ಟಿ ಹೇಳಿದ ಹಾಗೇ ನಾನು ಹೇಳಿದೆ. ಆಸ್ತಿ ವಿಚಾರವಾಗಿ ಈ ಕತೆ ಹೇಳಿಕೊಟ್ಟಿದ್ದರು.

ಹೀಗಾಗಿ ಈ ಕತೆ ಹೇಳಿದೆ. ನನಗೆ ದುಡ್ಡಿಗಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ. ನನಗೂ ಯಾರೂ ಆಫರ್ ಮಾಡಿಲ್ಲ. ಆದರೆ ನನ್ನ ತಾತನ ಆಸ್ತಿಯನ್ನು ಧರ್ಮಸ್ಥಳಕ್ಕೆ ದಾನವಾಗಿ ಹೇಗೆ ಕೊಟ್ಟರು ಅನ್ನೋದು ನನ್ನ ಪ್ರಶ್ನೆ. ಅದು ನನಗೂ ಸಿಗಬೇಕಿತ್ತು. ಆದರೆ ನನಗೆ ಪಾಲು ಸಿಗಲಿಲ್ಲ ಎಂದು ಸುಜಾತ್ ಭಟ್ ನೋವು ತೋಡಿಕೊಂಡಿದ್ದಾಳೆ.ಮಗಳು ಫೋಟೋ ಬಿಡುಗಡೆ ಮಾಡಿದ್ದು ಸುಳ್ಳು, ಅದು ಖಂಡಿತ ಸುಳ್ಳು ಫೋಟೋ ಎಂದು ಸುಜಾತಾ ಭಟ್ ಹೇಳಿದ್ದಾರೆ. ಇದೇ ವೇಳೆ ತಾನು ಧರ್ಮಸ್ಥಳದ ಜನರ ನಂಬಿಕೆ, ಜನರ ಭಾವನೆ ಜೊತೆ ಆಟವಾಡಿಲ್ಲ. ಆದರೆ ನನ್ನನ್ನು ಜನರ ಭಾವನೆ ಜೊತೆ ಆಟವಾಡುವಂತೆ ಕೆಲವರು ಮಾಡಿದರು ಎಂದು ಸುಜಾತಾ ಭಟ್ ಹೇಳಿದ್ದಾರೆ. ಆಸ್ತಿಯಲ್ಲಿ ನನಗೆ ಪಾಲು ನೀಡದೆ ಕೊಟ್ಟಿದ್ದಾರೆ. ಈ ನೋವು ನನಗಿದೆ ಎಂದು ಹೇಳಿದ್ದಾರೆ.

