
ಬೆಂಗಳೂರಿನ ಶ್ರೀ ಕಂಠೀರವ ಸ್ಟೇಡಿಯಂ ನಲ್ಲಿ ನಡೆದ 26ನೇ ರಾಷ್ಟ್ರ ಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟ ದಲ್ಲಿ ಶ್ರೀ ಧರ್ಮಸ್ಥಳ ಮಜುನಾಥೇಶ್ವರ ಕ್ರೀಡಾ ಸಂಘದ ವಿದ್ಯಾರ್ಥಿ ಅದ ತನು ಕೆ ಸಿ ಹೆಗ್ಡೆ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ರಾಷ್ಟ್ರ ಮಟ್ಟದಲ್ಲಿ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ

.ಈ ಮೊದಲು ಇವರು ತಾಲೂಕ್ ಮಟ್ಟವನ್ನು ಎಸ್ ಡಿ ಎಂ ಕಾಲೇಜ್ ಉಜಿರೆ ಯಲ್ಲಿ ಆಡಿದ್ದು ಪ್ರಥಮ ಸ್ಥಾನ ಪಡೆದು, ಜಿಲ್ಲಾಮಟ್ಟ ಕ್ಕೆ ಆಯ್ಕೆ ಜಿಲ್ಲಾ ಮಟ್ಟ ವನ್ನು ಮಂಗಳೂರು ಅಲ್ಲಿ ಆಡಿ ಅಲ್ಲಿಯೂ ಸಹ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೇ ಆಯ್ಕೆ ಆಗಿರುತ್ತಾರೆ.

ರಾಜ್ಯ ಮಟ್ಟದ ಟೆನ್ನಿಸ್ ವಾಲಿಬಾಲ್ ಪಂದ್ಯಾಟ ಸಾಯಿ ಏಂಜಲ್ಸ್ ಪಿ ಯು ಕಾಲೇಜ್ ಅಲ್ಲಿ ಏರ್ಪಡಿಸಿದ್ದ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿದ್ದರು.ಕರ್ನಾಟಕ ರಾಜ್ಯದಿಂದ ಪ್ರತಿನಿಧಿಸಿದ್ದಾರೆ.ಇವರು ಹೊಸೂರು ಗುಡ್ಡೆಕೇರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದು ಇವರಿಗೆ ಮಾಜಿ ಎ ಪಿ ಎಂ ಸಿ ಅಧ್ಯಕ್ಷರಾದ ಹಸಿಮನೆ ಮಹಾಬಲೇಶ್ ಅಭಿನಂದನೆ ತಿಳಿಸಿದ್ದಾರೆ.



