
ಅಕ್ರಮ ಚಟುವಟಿಕೆ ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು – ರಂಜಿತ್ ಎಸ್
ತೀರ್ಥಹಳ್ಳಿ :ತಾಲೂಕು ಅಧಿಕಾರಿಗಳೊಂದಿಗೆ ತಹಶೀಲ್ದಾರ್ ಎಸ್ ರಂಜಿತ್ ತಾಲೂಕಿನ ವಿವಿಧ ಹೋಟೆಲ್‌ಗಳು ಹಾಗೂ ಗ್ಯಾಸ್ ಸ್ಟೇಷನ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು . ಪರಿಶೀಲನೆ ವೇಳೆ ಎಲ್‌ಪಿಜಿ ಸಿಲಿಂಡರ್‌ಗಳ ಲಭ್ಯತೆ ಮತ್ತು ಅಗತ್ಯ ಸರಕುಗಳ ಸಮರ್ಪಕ ಪೂರೈಕೆ ಇರುವುದನ್ನು

ಖಚಿತಪಡಿಸಿಕೊಂಡು ಜೊತೆಗೆ ವ್ಯಾಪಾರಿಗಳಿಗೆ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದ್ದು, ಯಾವುದೇ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

