Oplus_131072

ಪುಷ್ಪಕ್ ಎಕ್ಸ್‌ಪ್ರೆಸ್‌ ಪ್ರಯಾಣಿಕರಿದ್ದ ಟ್ರೈನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ಹರಡಿ ಗಾಬರಿಯಿಂದ ಕೆಳಗೆ ಇಳಿದಿದ್ದ ವೇಳೆ ಪಕ್ಕದ ಟ್ರ್ಯಾಕ್ ಮೇಲೆ ಬಂದ ಕರ್ನಾಟಕ ಎಕ್ಸ್‌ಪ್ರೆಸ್ ರೈಲು ಪ್ರಯಾಣಿಕರಿಗೆ ಡಿಕ್ಕಿ ಹೊಡೆದಿದೆ.

ಈ ದುರಂತದಲ್ಲಿ 8 ಜನರು ಮೃತರಾಗಿದ್ದಾರೆ ಎಂದು ವರದಿಯಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.

ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಪಚೋರಾ ತಾಲ್ಲೂಕಿನ ಪಾರ್ಥಡೆ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿತ್ತು ಎಂಬ ಮಾಹಿತಿ ಸಿಕ್ಕಿದೆ.

Leave a Reply

Your email address will not be published. Required fields are marked *