ಶಿವಮೊಗ್ಗ :ಚಾಲಕನ ನಿಯಂತ್ರಣ ತಪ್ಪಿದ ಸಿಟಿ ಬಸ್ ಚರಂಡಿಗೆ ಪಲ್ಟಿಯಾಗಿದೆ.ಬೊಮ್ಮನಕಟ್ಟೆ ರೈಲ್ವೆ ಗೇಟ್ ಬಳಿ ಇಂದು ಬೆಳಿಗ್ಗೆ ಘಟನೆ ನಡೆದಿದ್ದು,ಬಸ್ಸಿನಲ್ಲಿ ವಿದ್ಯಾರ್ಥಿಗಳು ಸೇರಿ ಸುಮಾರು 20 ಜನರು ಪ್ರಯಾಣಿಸುತಿದ್ದರು.ಘಟನೆಯಲ್ಲಿ ಗಾಯಗೊಂಡಿರುವ ಪ್ರಯಾಣಿಕರನ್ನು ಸ್ಥಳೀಯರು ರಕ್ಷಣೆ ಮಾಡಿದ್ದು.ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಮತ್ತು ಸರ್ಜಿ ಆಸ್ಪತ್ರೆಗೆ ರವಾನಿಸಲಾಗಿದೆ. ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.









