ಮರಣ ಪ್ರಮಾಣಪತ್ರ (MCCD) ವಿತರಣಾ ವ್ಯವಸ್ಥೆಯನ್ನು ಪಾರದರ್ಶಕವಾಗಿಮತ್ತು ಕ್ರಮಬದ್ಧವಾಗಿ ಅನುಷ್ಠಾನಗೊಳಿಸುವ ಕುರಿತು ಆರೋಗ್ಯ ಇಲಾಖೆ ಮೂಲಕ ಪ್ರಮುಖ ಸುತ್ತೋಲೆಯನ್ನು ಹೊರಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.ಪ್ರತಿ ಸಾವಿನ ನಿಖರ ಕಾರಣ ತಿಳಿಯುವ ಉದ್ದೇಶದಿಂದ ವೈದ್ಯಕೀಯ ಸಂಸ್ಥೆಗಳಲ್ಲಿನ ಸಾವುಗಳನ್ನು ಹೊರತುಪಡಿಸಿ ಬೇರೆ ಯಾವುದೇ ಸ್ಥಳದಲ್ಲಿ ವ್ಯಕ್ತಿ ಮರಣ ಹೊಂದಿದಲ್ಲಿ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಮರಣ ಹೊಂದಿದ ವ್ಯಕ್ತಿಯನ್ನು ವೈದ್ಯರು ಪರೀಕ್ಷಿಸಿ ನಮೂನೆ 4ಎ ನಲ್ಲಿ ಮರಣಕ್ಕೆ ಕಾರಣವೇನು ಎನ್ನುವ ಬಗ್ಗೆ ಪ್ರಮಾಣ ಪತ್ರವನ್ನು ಸಂಬಂಧಪಟ್ಟವರಿಗೆ ಉಚಿತವಾಗಿ ನೀಡಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.ಸಾವು ಸಂಭವಿಸಿದ 21 ದಿನದಲ್ಲಿ ಸಂಬಂಧಪಟ್ಟವರು ಮರಣ ನೋಂದಣಿ ಮಾಡುವುದು ಕಡ್ಡಾಯವಾಗಿದೆ. ವೈದ್ಯಕೀಯ ಪ್ರಮಾಣ ನಮೂನೆಗಳನ್ನು ನೀಡಲು ನಿರ್ಲಕ್ಷಿಸುವ ವೈದ್ಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Leave a Reply

Your email address will not be published. Required fields are marked *