ಸರ್ಕಾರಿ ಶಾಲೆ(Government School)ಗಳಿಗೆ ಸೇರಬೇಕೆಂದು ಕಾದು ಕುಳಿತ ಶಿಕ್ಷಕರಿಗೆ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ. ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.

ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23 ರಿಂದ ನವೆಂಬರ್ 9ರವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.ಶಿವಮೊಗ್ಗದಲ್ಲಿ ಜಿಲ್ಲೆಯಲ್ಲಿ ಶೇ. 97 ರಷ್ಟು ಸಮೀಕ್ಷೆ ಮುಕ್ತಾಯವಾಗಿದೆ.

ನಿನ್ನೆಗೆ ಶಿಕ್ಷಕರನ್ನು ಸಮೀಕ್ಷೆಗೆ ಬಳಸುವುದನ್ನು ನಿಲ್ಲಿಸಲಾಗಿದೆ. ಕೆಲವರು ಮತವೇ ಹಾಕುವುದಿಲ್ಲ.ಅಂತಹವರು ಮಾತ್ರ ಎಲ್ಲಾ ಸೌಲಭ್ಯವನ್ನು ಕೇಳುತ್ತಾರೆ. ಇಂತಹವರು ಪ್ರಜಾಪ್ರಭುತ್ವಕ್ಕೆ ಅಪಮಾನ ಮಾಡುತ್ತಿದ್ದಾರೆ ಎಂದರು.

Leave a Reply

Your email address will not be published. Required fields are marked *