

ಸತ್ಯಶೋಧ ನ್ಯೂಸ್ : ಮಧ್ಯ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿಯೂ ಚಳಿ ಹೆಚ್ಚಾಗಲಿದ್ದು, ರಾಜ್ಯದ ಜನತೆ ತರ ತರ ನಡುಗುವಂತಾಗಿದೆ. ಇನ್ನು ಕರಾವಳಿ ಭಾಗದಲ್ಲಿ ಒಣಹವೆ ಇರಲಿದ್ದು ಹವಾಮಾನ ಇಲಾಖೆ ತಿಳಿಸಿದೆ .ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಗದಗದಲ್ಲಿ ಭಾರಿ ಚಳಿ ಇರಲಿದ್ದು ಅರೆಂಜ್ ಅಲರ್ಟ್ ಇರಲಿದೆ. ಕೊಪ್ಪಳ, ಬಳ್ಳಾರಿ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲೂ ಚಳಿ ಹೆಚ್ಚಿರಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ಚಳಿ ಹೆಚ್ಚಾದ ಹಿನ್ನಲೆ ಅರೋಗ್ಯದ ಮೇಲೆ ಪ್ರಭಾವ ಬೀರಲಿದೆ. ಜನತೆ ಕೊಂಚ ಎಚ್ಚರ ವಹಿಸುವುದು ಅಗತ್ಯವಾಗಿದೆ.ಹಾಗೆಯೇ ಬೆಂಗಳೂರು ನಗರದಲ್ಲಿ ನಾಳೆ ಮುಂಜಾನೆ ವೇಳೆ ಮಂಜು ಕವಿದ ವಾತಾವರಣ ಇರಲಿದ್ದು, ನಗರದ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ತಲುಪಲಿದೆ. ಹಾಗೆಯೇ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ಇರಲಿದೆ. ಗಾಳಿಯ ವೇಗ ಗಂಟೆಗೆ 5-10 ಕಿ.ಮೀ. ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

