
ತೀರ್ಥಹಳ್ಳಿ : ಮನೆಗಳ್ಳತನಕ್ಕೆ ಬಂದಿದ್ದ ವ್ಯಕ್ತಿಯೊಬ್ಬ ಜನರನ್ನು ಕಂಡು ಪರಾರಿಯಾಗುವಾಗ ಜಲಜೀವನ್ ಮಿಷನ್ ಯೋಜನೆಯ ಪೈಪ್ ಅಳವಡಿಸಲು ತೋಡಿದ್ದ ಗುಂಡಿಗೆ ಬಿದ್ದು ಗಾಯಗೊಂಡ ಘಟನೆ ಎ.9ರ ಬುಧವಾರ ತೀರ್ಥಹಳ್ಳಿಯಲ್ಲಿ ನಡೆದಿದೆ.

ಊರಿನ ಗ್ರಾಮಸ್ಥರೇ ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ತೀರ್ಥಹಳ್ಳಿ ತಾಲೂಕಿನ ದೇಮ್ಲಾಪುರ ಗ್ರಾಮದ ಚಂದ್ರಶೇಖರ್ ಎಂಬವರ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದಾಗ ಈ ಘಟನೆ ಸಂಭವಿಸಿದೆ.

ಕಳ್ಳತನಕ್ಕೆ ಬಂದವನ ಹೆಸರನ್ನು ಹನೀಫ್ ಎಂದು ದೂರಿನಲ್ಲಿ ಉಲ್ಲೇಖಿಸಿದ್ದು, ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


