

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ಡಿ. 11ರವರೆಗೂ ಕರ್ನಾಟಕದಲ್ಲಿ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.ಇನ್ನು ಬೆಂಗಳೂರು ಸೇರಿದಂತೆ ಹಲವೆಡೆ ಚಳಿ ಜಾಸ್ತಿಯಾಗಿದ್ದು,ವಯಸ್ಸಾದವರಲ್ಲಿ ಹಾಗೂ ಚಿಕ್ಕ ಮಕ್ಕಳಿಗೆ ಶೀತ ಜ್ವರ ಕಾಣಿಸುತಿದೆ. ಜೊತೆಗೆ ಬೆಳಗಾವಿ,

ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಶಿವಮೊಗ್ಗ ಬೀದರ್, ಮಂಡ್ಯ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂಬರುವ ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


