ತೀರ್ಥಹಳ್ಳಿ: ದಿ29.10.2025 ರಂದು ಸಾಹಿತಿ ಎಸ್ ಎಲ್ ಭೈರಪ್ಪರಿಗೆ ನುಡಿ ನಮನ ಕಾರ್ಯಕ್ರಮವನ್ನು ತಾಲೂಕಾಡಳಿತದಿಂದ ಹಮ್ಮಿಕೊಂಡಿದ್ದು ಈ ಸಂಬಂಧ ತೀರ್ಥಹಳ್ಳಿ ತಹಶೀಲ್ದಾರ್ ಎಸ್ ರಂಜಿತ್ ಸರ್ವರಿಗೂ ಸ್ವಾಗತ ಬಯಸಿದ್ದಾರೆ.

ಪದ್ಮ ಭೂಷಣ/ ಪದ್ಮಶ್ರೀ ಪುರಸ್ಕೃತ ಕನ್ನಡ ಸಾಹಿತಿ ಶ್ರೀಯುತ ಎಸ್ ಎಲ್ ಭೈರಪ್ಪನವರು ದಿನಾಂಕ-24.09.2025 ರಂದು ನಿಧನರಾಗಿದ್ದು, ಕನ್ನಡ ಸಾಹಿತ್ಯ ಲೋಕಕ್ಕೆ ತಮ್ಮದೇ ಆದ ಆನೇಕ ಕೃತಿಗಳನ್ನು ಅರ್ಪಿಸಿ ಶ್ರೀಮಂತಗೊಳಿಸಿದ್ದರು. ಶ್ರೀಯುತ ಎಸ್ ಎಲ್ ಭೈರಪ್ಪನವರ “ನುಡಿ ನಮನ”ಕಾರ್ಯಕ್ರಮವನ್ನು ತೀರ್ಥಹಳ್ಳಿಯ ಗ್ರಾಮೀಣಾಭಿವೃದ್ಧಿ ಭವನದಲ್ಲಿ ತೀರ್ಥಹಳ್ಳಿ ತಾಲ್ಲೂಕು ಆಡಳಿತದಿಂದ ರಂದು ಸಂಜೆ 3.00 ಗಂಟೆಗೆ ಶಾಸಕರಾದ ಆರಗ ಜ್ಞಾನೇಂದ್ರ ಇವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿರುತ್ತದೆ. ಈ ನುಡಿ ನಮನ ಸಭಾ ಕಾರ್ಯಕ್ರಮದಲ್ಲಿ ಸರ್ವರೂ ಭಾಗವಹಿಸಲು ಕೋರಿದೆ.

Leave a Reply

Your email address will not be published. Required fields are marked *