ರಾತ್ರಿ 12 ಗಂಟೆಗೆ ಬೆಂಗಳೂರಿಗೆ ಆಗಮನ

ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಕ್ ನಗರದಿಂದ ಗುರುವಾರ ಮಧ್ಯಾಹ್ನ ಹೊರಟಿರುವುದು ಖಚಿತವಾಗಿದೆ. ಶುಕ್ರವಾರ ರಾತ್ರಿ 12 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ.ಪ್ರಜ್ವಲ್ ಏರ್ ಲುಫ್ತಾನ್ಸ್ ಏರ್ಲೈನ್ಸ್ನಲ್ಲಿ (ಎಲ್‌ಎಚ್ 764) ಹತ್ತಿರುವ ಬಗ್ಗೆ ಎಸ್ಐಟಿಗೆ ಮಾಹಿತಿ ಲಭ್ಯವಾಗಿದೆ. ಆ ವಿಮಾನವು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 2 ಕ್ಕೆ ರಾತ್ರಿ 12. 40 ಕ್ಕೆ ಆಗಮಿಸಲಿದೆ.ಇನ್ನು ಮುಂಜಾಗ್ರತಾ ಕ್ರಮವಾಗಿ ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.