Oplus_131072
Oplus_131072

ತೀರ್ಥಹಳ್ಳಿ : ತಾಲೂಕಿನ ಆಗುಂಬೆ ಹೋಬಳಿಯ ಕುಂದಾದ್ರಿ ಸಮೀಪದ ನಾಬಳ ಎಂಬಲ್ಲಿ ಬೆಳಿಗ್ಗೆ ಸು 9ಗಂಟೆ ಸಮಯದಲ್ಲಿ ಕಾಡುಕೋಣ ಪ್ರತ್ಯಕ್ಷವಾಗಿದ್ದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಮಲೆನಾಡಲ್ಲಿ ಕಾಡುಕೋಣ,ಕಾಡಾನೆ, ಹುಲಿ ಹೀಗೆ ಇತರ ಕಾಡು ಪ್ರಾಣಿಗಳ ಹಾವಳಿ ಅಧಿಕವಾಗಿದ್ದು ಹಲವೆಡೆ ಬೆಳೆ ಹಾನಿ ಜೊತೆಗೆ ಪ್ರಾಣ ಹಾನಿಗಳು ವರದಿಯಾಗುತ್ತಿವೆ. ಈ ಬಗ್ಗೆ ಅರಣ್ಯ ಇಲಾಖೆ ಗಮನ ಹರಿಸಿ ಕಾಡುಪ್ರಾಣಿಗಳು ನಾಡಿಗೆ ಪ್ರವೇಶಿಸದಂತೆ ಸೂಕ್ತ ಕ್ರಮ ಜರುಗಿಸುವುದು ಅಗತ್ಯವಾಗಿದೆ.

Leave a Reply

Your email address will not be published. Required fields are marked *