

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವಿಭಾಗದ ರಾಜ್ಯಾಧ್ಯಕ್ಷರಾದ ಎಸ್. ಮಧು ಬಂಗಾರಪ್ಪನವರ ಅನುಮೋದನೆ ಮೇರೆಗೆ ರಾಜೇಶ್ ಟಿ ಎನ್ ಮೊಗವೀರ್ ಇವರನ್ನು ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಸಂಘಟನಾ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.ಪಕ್ಷದ ಹಾಗೂ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಮಾರ್ಗದರ್ಶನದಲ್ಲಿ ಮತ್ತು ಜಿಲ್ಲಾ, ಸ್ಥಳೀಯ ನಾಯಕರ ಸಹಯೋಗದಲ್ಲಿ ಹಿಂದುಳಿದ ವರ್ಗಗಳ ವಿಭಾಗದ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ತಾವು ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ.


