- ಯಡಿಯೂರಪ್ಪಗೆ ಬಿಗ್ ರಿಲೀಫ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಆರೋಪಿ ಸ್ಥಾನದಲ್ಲಿ ನಿಂತಿದ್ದಾರೆ. ಆದರೆ, ಈ ಪ್ರಕರಣ ಸಂಚಲನ ಸೃಷ್ಟಿಯಾದಲ್ಲಿಂದ ಸುಮಲತಾ ಎಲ್ಲೂ ಕಾಣಿಸಿಕೊಂಡಿಲ್ಲ. ಹಿರಿ ಮಗ ಮಾಡಿದ್ದು ತಪ್ಪು ಸರಿ ಬಗ್ಗೆ ಎಲ್ಲಿಯೂ ಪ್ರಸ್ತಾಪ ಮಾಡದೇ ಸೈಲೆಂಟ್ ಆಗಿದ್ದಾರೆ. ಇವರೊಂದಿಗೆ ದರ್ಶನ್‌ನ ಬಿಗ್ ಬ್ರದರ್ ಅಂತ ಕರೆಯೋ ಅಭಿಷೇಕ್ ಅಂಬರೀಶ್ ಕೂಡ ಪ್ರತಿಕ್ರಿಯೆ ಕೊಟ್ಟಿಲ್ಲ.
ಯಡಿಯೂರಪ್ಪಗೆ ಬಿಗ್ ರಿಲೀಫ್ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಸಂಬಂಧ ಬಿವೈಎಸ್ ಪರ ವಕೀಲರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ನ ನ್ಯಾ.ಕೃಷ್ಣ ಎಸ್.ದೀಕ್ಷಿತ್ ಅವರ ಏಕಸದಸ್ಯ ಪೀಠವು ವಿಚಾರಣೆ ನಡೆಸಿ ಬಿಎಸ್ವೈ ಅವರನ್ನು ಬಂಧಿಸದಂತೆ ಆದೇಶಿಸಿದೆ.ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಯಾದ ಹಿನ್ನೆಲೆ ಬಂಧನ ಭೀತಿಯಿಂದ ನೀರಿಕ್ಷಣಾ ಜಾಮೀನು ಕೋರಿ ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಲಾಗಿತ್ತು. ಇದಲ್ಲದೇ ಈಗಾಗಲೇ ಅವರು ಪ್ರಕರಣ ರದ್ದು ಕೋರಿ ಹೈಕೋರ್ಟಿಗೂ ಅರ್ಜಿಯನ್ನು ಸಲ್ಲಿಸಿದ್ದರು. ಇನ್ನು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ತನಿಖೆಗೆ ಹಾಜರಾಗುವಂತೆ ಷರತ್ತು ವಿಧಿಸಿ ಬಿಎಸ್ವೈ ಅವರನ್ನು ಮುಂದಿನ ವಿಚಾರಣೆವರೆಗೆ ಬಂಧನ ಮಾಡದಂತೆ ಆದೇಶಿಸಿದೆ.

