
ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮುಂಗಾರು ಮಳೆ ಅಬ್ಬರಿಸಿ ಬೊಬ್ಬೆರೆಯುತ್ತಿದೆ. ಪರಿಣಾಮ ಹಲವು ಜಿಲ್ಲೆಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿವೆ. ಹಾಗೆಯೇ ಮುಂದಿನ ಐದು ದಿನ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಈ ಭಾಗಗಳಲ್ಲಿ ಬಿರುಗಾಳಿ ಸಹಿತ ಸುನಾಮಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೆಪ್ಟೆಂಬರ್ ತಿಂಗಳು ಆರಂಭವಾಗಿದ್ದು, ಈ ತಿಂಗಳಿನಲ್ಲೂ ಕೂಡ ಹಲವೆಡೆ ಸಾಧಾರಣ ಮಳೆಯಾದ್ರೆ, ಇನ್ನೂ ಕಲವೆಡೆ ರಣಭೀಕರ ಮಳೆ ಮುಂದುವರೆದಿದೆ. ಅದರಲ್ಲೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆ ಪ್ರಮಾಣ ತುಸು ತಗ್ಗಿದೆ. ಆದರೆ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಭಾಗಗಳಲ್ಲಿ ಭಾರೀ ಮಳೆ ಮುಂದುವರೆದಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಹಲವೆಡೆ ಸೆಪ್ಟೆಂಬರ್ 8ರ ವರೆಗೂ ಸುನಾಮಿ ಮಳೆ ಸುರಿಯುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

