- ಮುಂದುವರೆದ ಪೋಲೀಸರ ಶೋಧ ಕಾರ್ಯ

ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿ ಶ್ರೇಯಸ್ ನಾಯ್ಕ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಲ್ಲದೆ ಆತ ಲೈಂಗಿಕ ದೌರ್ಜನ್ಯದ ವಿಡಿಯೋ ಮಾಡಿ ಬ್ಲಾಕ್ ಮೈಲ್ ಮಾಡುತ್ತಿದ್ದ ಎನ್ನಲಾಗಿದೆ.ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಅತ್ಯಾಚಾರದ ದೃಶ್ಯ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ.ಬಾಲಕಿ ಗರ್ಭವತಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಪ್ರಜ್ವಲ್ ರೇವಣ್ಣ ಮಾದರಿಯಲ್ಲೇ ವಿಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತ ಕಾಮಿ ವಿರುದ್ಧ ಮೇ 18 ರಂದು ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದಾನೆ. ಆರೋಪಿ ಶ್ರೇಯಸ್ ಬಂಧನಕ್ಕೆ ವಿಶೇಷ ತನಿಖಾ ತಂಡ ರಚನೆ ಮಾಡಿ ಶೋಧ ಕಾರ್ಯ ಮುಂದುವರೆಸಿದೆ.


