• ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಹಿನ್ನಲೆ
  • ರಾಜಧಾನಿಗೂ ಹಬ್ಬಿದ ನಂಟು

ಉಡುಪಿ :ನಗರದ ಕುಂಜಿಬೆಟ್ಟುವಿನಲ್ಲಿ ಮೇ 18ರ ಮುಂಜಾನೆ 2 ಗಂಟೆಯ ಹೊತ್ತಿಗೆ ಕುಂಜಿಬೆಟ್ಟು ರಸ್ತೆಯಲ್ಲಿ ಒಂದೆ ಗುಂಪಿನ ಎರಡು ತಂಡಗಳು ಗಾಂಜಾ ಅಮಲಿನಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಕಾಳಗ ನಡೆಸಿದ್ದವು. ಈ ವಾರ್​ನಲ್ಲಿ ಭಾಗಿಯಾಗಿದ್ದ ಮೂವರು ಪೊಲೀಸರಿಗೆ ಶರಣಾಗಿದ್ದಾರೆ.ಉಡುಪಿಯ ಕಾಪುವಿನಲ್ಲಿ ಟೀಂ ಗರುಡ ಹೆಸರಿನಲ್ಲಿ ತಂಡ ಕಟ್ಟಿಕೊಂಡಿದ್ದ ಪುಂಡರು ಗಾಂಜಾ, ದನ ಕಳ್ಳತನ, ದರೋಡೆಯಲ್ಲಿ ಸಕ್ರಿಯವಾಗಿತ್ತು. ಸದಾ ತಲವಾರು, ಕತ್ತಿ, ಡ್ರ್ಯಾಗನ್‌ ಹಿಡಿದು ತಿರುಗಾಡುತ್ತಿದ್ದ ಈ ಗುಂಪಿಗೆ ರೌಡಿಶೀಟರ್‌ ಆಶಿಕ್‌ ಎಂಬಾತನೇ ಕ್ಯಾಪ್ಟನ್‌. ನಾಲ್ಕು ವರ್ಷದ ಹಿಂದೆ ಅಂದಿನ ಎಸ್ಪಿ ಡಾ. ವಿಷ್ಣುವರ್ಧನ್‌ ಈ ತಂಡದ ಹೆಡೆಮುರಿ ಕಟ್ಟಿದ್ದರು.ಗರುಡ ಗ್ಯಾಂಗ್‌ನ ಮಜೀದ್, ಅಲ್ಫಾಜ್, ಶರೀಫ್ ಬಂಧಿತರು. ಈ ಮೊದಲು ಆಶಿಕ್, ರಾಕೀಬ್, ಸಕ್ಲೈನ್ ಎಂಬುವವರನ್ನು ಬಂಧಿಸಲಾಗಿತ್ತು. ಘಟನೆಯ ಗಂಭೀರತೆ ಮತ್ತು ಸಾರ್ವಜನಿಕರ ಆಗ್ರಹದ ನಡುವೆ ಪೊಲೀಸರು ಕಾರ್ಯಾಚರಣೆ ನಡೆಸಿ, ಮತ್ತೆ ಮೂವರನ್ನು ಬಂಧಿಸಿದ್ದಾರೆ. ಇದುವರೆಗೆ ಪ್ರಕರಣದಲ್ಲಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ.ಕರಾವಳಿಯಲ್ಲಿ ಹುಟ್ಟಿಕೊಂಡ ಈ ಗ್ಯಾಂಗ್ ರಾಜಧಾನಿವರೆಗೂ ಕೂಡ ತಮ್ಮ ಕಾರ್ಯಾಚರಣೆಯನ್ನು ವಿಸ್ತರಿಸಿದೆ. ಸುಲಭದಲ್ಲಿ ಅಡ್ಡ ದಾರಿಯ ಮೂಲಕ ದುಡ್ಡು ಮಾಡುವ ಹುಚ್ಚಿಗೆ ಬಿದ್ದ ಈ ಗ್ಯಾಂಗ್ ಇನ್ನು ಹಲವು ಕೃತ್ಯಗಳಲ್ಲಿ ಭಾಗಿಯಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *