- ಲ್ಯಾಬ್ ಟೆಸ್ಟ್ ನಲ್ಲಿ ಏನಿದೆ ಗೊತ್ತಾ ನೋಡಿದ್ರೆ ಶಾಕ್ ಆಗ್ತೀರಾ

ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಚಂದ್ರಬಾಬು ನಾಯ್ಡು ಅವರ ಆರೋಪ ಸತ್ಯ ಎಂಬುದು ಇದೀಗ ಬಂದಿರುವ ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.ತಿರುಪತಿಯ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಮೀನಿನ ಎಣ್ಣೆ, ಪ್ರಾಣಿಗಳ ಕೊಬ್ಬು ಇರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.

ಇದರಲ್ಲಿ ಹಂದಿಯ ಕೊಬ್ಬು, ದನದ ಕೊಬ್ಬು, ಪಾಮಾಯಿಲ್, ಸೋಯಾಬಿನ್, ಸೂರ್ಯಕಾಂತಿ ಎಣ್ಣೆ, ಮೆಕ್ಕೆ ಜೋಳ ಎಣ್ಣೆ ಬೆರೆಸಿದ ಕಡಿಮೆ ಗುಣಮಟ್ಟದ ತುಪ್ಪ ಬಳಕೆ ಮಾಡಲಾಗುತ್ತಿದೆ ಎಂದು ಖಚಿತವಾಗಿದೆ.



