ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ ಅಬ್ಬರಿಸುತ್ತಿದೆ. ದಕ್ಷಿಣ ಒಳನಾಡಿನಲ್ಲಿ ಹಲವೆಡೆ ಮಳೆಯಾಗಿದ್ದರೆ, ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಭಾರಿ ಮಳೆಯ ಅಲರ್ಟ್ ಕೊಡಲಾಗಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಅಕ್ಟೋಬರ್ 18 ಹಾಗೂ 19 ರಂದು ಭಾರಿ ಮಳೆಯ ಯೆಲ್ಲೋ ಅಲರ್ಟ್ ಕೊಡಲಾಗಿದೆ.

ಅಲ್ಲದೆ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಅಕ್ಟೋಬರ್‌ 24 ರವರೆಗೂ ಭಾರಿ ಮಳೆಯ ಯೆಲ್ಲೋ ಅಲರ್ಟ್ ಕೊಡಲಾಗಿದೆ.ಜೊತೆಗೆ ಮಳೆ ಜೊತೆಗೆ ಗುಡುಗು ಸಿಡಿಲು ಸಹಿತ ಮಳೆ ಜಾಸ್ತಿಯಾಗಿದೆ. ಹಾಸನ -ಕೊಡಗು ಜಿಲ್ಲೆಗಳಿಗೂ ಇಂದು ಭಾರಿ ಮಳೆಯ ಮುನ್ಸೂಚನೆ ಇದ್ದು ಯೆಲ್ಲೋ ಅಲರ್ಟ್ ಕೊಡಲಾಗಿದೆ. ಮುಂದಿನ ವಾರಾಂತ್ಯಕ್ಕೆ ಮತ್ತೆ ಮಳೆ ಬಿರುಸು ಪಡೆಯುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *