- ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

ರಾಜ್ಯದಲ್ಲಿ ಡೆಂಘೀ ಉಲ್ಬಣ ವಾದ ಜೊತೆಗೆ ಝೀಕಾ ವೈರಸ್ ಅಬ್ಬರ ಜಾಸ್ತಿಯಾಗಿದೆ , ಈ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಆರೋಗ್ಯ ಇಲಾಖೆಯು ಮಾರ್ಗಸೂಚಿ ಬಿಡುಗಡೆ ಮಾಡಿದೆ.ಡೆಂಘೀ ರೀತಿಯಲ್ಲೇ ಸೋಂಕಿತ ಈಡಿಸ್ ಸೊಳ್ಳೆ ಕಚ್ಚುವುದರಿಂದ ಝೀಕಾ ವೈರಸ್ ಹರಡುತ್ತದೆ. ಸೋಂಕು ಕಾಣಿಸಿಕೊಂಡ ತಕ್ಷಣ ಎಚ್ಚೆತ್ತು ಚಿಕಿತ್ಸೆ ಪಡೆಯುವ ಸಲುವಾಗಿ ರೋಗದ ಗುಣಲಕ್ಷಣ, ಸೋಂಕು ಉಂಟಾದರೆ ತೆಗೆದುಕೊಳ್ಳಬೇಕಿರುವ ಪರಿಹಾರ ಕ್ರಮ, ಸೊಳ್ಳೆ ನಿಯಂತ್ರಣ ಮಾಡಲು ಮಾಡಬೇಕಿರುವ ಕ್ರಮಗಳ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ಮುನ್ನೆಚ್ಚರಿಕೆ ಕ್ರಮಗಳು.?
ನಿಮ್ಮ ಮನೆಯಂಗಳದ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ. ಸದ್ಯ ಮಳೆ ಇರುವುದರಿಂದ ರಸ್ತೆಯ ಹೊಂಡಗಳಲ್ಲಿ ನೀರು ನಿಲ್ಲುವುದು ಸಾಮಾನ್ಯ. ಇಂತಹ ಕಡೆ ಸೊಳ್ಳೆಗಳು ಸಂತನೋತ್ಪತ್ತಿ ಹೆಚ್ಚಿಸಿಕೊಂಡು ಮನುಷ್ಯರ ಮೇಲೆ ಹಗಲಿನ ವೇಳೆ ದಾಳಿ ಮಾಡುತ್ತವೆ.


